ತುಮಕೂರು:
ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಇಲ್ಲಿನ ಜಯನಗರ ಪೆÇಲೀಸರು ಬಂಧಿಸಿ, 2.5 ಲಕ್ಷ ರೂ. ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೈಕ್ ಕಳವು ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕಳ್ಳರ ಪತ್ತೆಗಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ವಿಶೇಷ ತನಿಖಾ ತಂಡವನ್ನು ರಚಿಸದ್ದರು.
ಅಂದಿನ ತಿಲಕ್ ಪಾರ್ಕ್ ಸಿಪಿಐ ಮುನಿರಾಜು ನೇತೃತ್ವದಲ್ಲಿ ಜಯನಗರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಸಿ ಮಂಜುನಾಥ್, ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿದ್ದಾರೆ.
ಬಂಧಿತರಾಗಿದ್ದ ನಾಲ್ವರ ಪೈಕಿ ಇಬ್ಬರು ಅಪ್ರಾಪ್ತ ಬಾಲಕರಾಗಿದ್ದು, ಇಬ್ಬರು ಪ್ರಾಪ್ತ ವಯಸ್ಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಸದರಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣೆ ಪತ್ರ ಸಲ್ಲಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಇನ್ನು ನಗರದಲ್ಲಿ ದಿನೇ ದಿನೆ ಬೈಕ್ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ವಾಗಿದ್ದು, ಇಂತಹ ಪುಂಡರಿಗೆ ಪೆÇಲೀಸರು ಬಿಸಿ ಮುಟ್ಟಿಸಿದ್ದಾರೆ. ಜಯನಗರ ಮತ್ತು ತಿಲಕ್ ಪಾರ್ಕ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ವಾಹನಗಳನ್ನು ಬಳಸಿಕೊಂಡು ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಹಾಗೂ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಟ್ಟು 16 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೋಲೀಸ್ ಮಾಹಿತಿ ದೊರೆತಿದೆ
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಅವರು ಜಿಲ್ಲೆಗೆ ವರ್ಗಾವಣೆಯಾಗಿ ಬಂದ ನಂತರ ಹಲವು ಕಳ್ಳತನ, ಸುಲಿಗೆ ದರೋಡೆ , ಕೊಲೆ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಆದರೆ ಇಲಾಖೆಯಲ್ಲಿ ಯಾವುದೇ ಪತ್ರಿಕಾಗೋಷ್ಠಿ ನಡೆಸದೇ ಪತ್ತೆಯಾದ ಪ್ರಕರಣಗಳ ವಿವರಗಳ ಬಗ್ಗೆ ಪತ್ರಿಕಾ ಪ್ರಕಟಣೆ ನೀಡದೇ ಪ್ರಚಾರದಿಂದ ದೂರ ಉಳಿದಿರುವ ತುಮಕೂರು ಎಸ್ಪಿರವರು ಜಿಲ್ಲೆಯಲ್ಲಿ, ಕಾರ್ಯ ನಿರ್ವಹಿಸುತ್ತಿರುವ ಪೋಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯನಿರ್ವಹಣೆಗೆ ಉತ್ತಮ ಬೆಂಬಲ ನೀಡುತ್ತಿದ್ದಾರೆ.
ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ಪತ್ತೆಮಾಡುತ್ತಿದ್ದು ಮುಂದೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪುರ್ ವಾಡ್ ರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಜನ ಸ್ನೇಹಿ ಪೋಲಿಸ್ ವ್ಯವಸ್ತೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

(Visited 345 times, 1 visits today)