ತುಮಕೂರು:


75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗೂಡಿ ರಾಷ್ಟ್ರಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಬಿಂಬಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕರೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಎಲ್ಲರೂ ಸೇರಿ ಒಳ್ಳೆಯ ರೀತಿಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅಂದು ನಗರದ ಪ್ರಮುಖ ವೃತ್ತಗಳಲ್ಲಿ ರಾಷ್ಟ್ರಧ್ವಜ, ದೀಪಾಲಂಕಾರ, ಬಾಳೆಕಂದು, ತಳಿರು ತೋರಣ, ದೇಶಭಕ್ತಿ ಗೀತೆಗಳನ್ನು ಎಲ್ಲರಿಗೂ ಕೇಳಿಸುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ತಿಳಿಸಿದರು.
ಸಂಜೆ ಸಾಂಸ್ಕøತಿಕ ಕಾರ್ಯಕ್ರದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದ ಅವರು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಹ್ವಾನಿತರಿಗೆ ವೇದಿಕೆ ವ್ಯವಸ್ಥೆಯನ್ನು ನಿರ್ಮಿಸುವ ಬಗ್ಗೆ, ವೇದಿಕೆಗೆ ಉತ್ತಮವಾದ ಬ್ಯಾಕ್ ಡ್ರಾಪ್ ಅಳವಡಿಸಲು, ಶಾಮಿಯಾನ ಹಾಗೂ ಕ್ರೀಡಾಂಗಣದ ಸಿದ್ಧತೆಗಳ ನಿರ್ವಹಣೆ ಹಾಗೂ ಮೇಲುಸ್ತುವಾರಿ ನಡೆಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 19 times, 1 visits today)