BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯ ರೈತ ಸಂಘದಿಂದ ಛೀ..ಥೂ..ಚಳುವಳಿ!
Trending

ರಾಜ್ಯ ರೈತ ಸಂಘದಿಂದ ಛೀ..ಥೂ..ಚಳುವಳಿ!

By News Desk BenkiyabaleUpdated:July 17, 2019 7:00 pm

ಹುಳಿಯಾರು:

      ಅಧಿಕಾರಕ್ಕೋಸ್ಕರ ಖರೀದಿಯಾದ ಶಾಸಕರುಗಳಿಗೆ ಹಾಗೂ ಅಭಿವೃದ್ಧಿ ಬಗ್ಗೆ ಚಿಂತಿಸದೆ ರೈತರ ಹಿತ ಕಡೆಗಣಿಸಿದ ಸರ್ಕಾರಕ್ಕೆ ಛೀ.. ಥೂ ಎಂದು ಉಗಿಯುವ ಚಳುವಳಿಯನ್ನು ಹುಳಿಯಾರಿನಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

      ಹುಳಿಯಾರಿನ ಬಸ್ ನಿಲ್ದಾಣದಲ್ಲಿ ನಡೆದ ವಿನೂತನ ಪ್ರತಿಭಟನೆಯಲ್ಲಿ ತಮ್ಮ ಶಾಸಕ ಸ್ಥಾನವನ್ನು ದುಡ್ಡಿಗೆ ಮಾರಾಟ ಮಾಡಿಕೊಂಡ ಶಾಸಕರುಗಳಿಗೆ ಛೀಮಾರಿ ಹಾಕಿದ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಜನರಿಂದ ಆಯ್ಕೆಯಾಗಿ ಶಾಸಕರಾದ ಇವರುಗಳಿಂದು ಕೇವಲ ಹಣ ಹಾಗೂ ಸಚಿವಗಿರಿ ಸ್ಥಾನಕ್ಕಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದರಲ್ಲದೆ ಹಣಕ್ಕಾಗಿ ಮತದಾರರನ್ನು ಕಡೆಗಣಿಸಿ ರೆಸಾರ್ಟ್‍ನಲ್ಲಿ ವಾಸಿಸುತ್ತಿರುವ ಶಾಸಕರುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಅವರ ಜನ್ಮ ಜಾಲಾಡಿದರು.

      ತಾಲೂಕು ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ರೈತರ, ಸಾರ್ವಜನಿಕರ ಹಿತಾಸಕ್ತಿಗೆ ಸ್ಪಂದಿಸದ ಇವರುಗಳು ಕೇವಲ ಹಣ ಹಾಗೂ ಅಧಿಕಾರದ ಲಾಲಸೆಗಾಗಿ ಸಚಿವರಾಗಿ ದುಡ್ಡು ಮಾಡುವ ಸಲುವಾಗಿ ರಾಜೀನಾಮೆ ನೀಡಿದ್ದು ಜನರು ಇವರುಗಳಿಗೆ ತಕ್ಕ ಪಾಠ ಕಲಿಸಬೇಕು ಎಂದರು. ತಮ್ಮನ್ನು ತಾವು ಜನಸೇವಕರು ಎಂದು ಕರೆದುಕೊಳ್ಳುತ್ತಾ ತಮ್ಮ ವೈಯಕ್ತಿಕ ಆಸೆ-ಆಕಾಂಕ್ಷೆಗಳಿಗೆ ರಾಜಿನಾಮೆ ನಾಟಕವಾಡುತ್ತಿರುವ ಇವರುಗಳ ಶಾಸಕ ಸ್ಥಾನ ರದ್ದಾಗಬೇಕು ಎಂದರು.

       ಪ್ರಜಾಪ್ರಭುತ್ವದ ಆಶಯಗಳಿಗೆ ತಿಲಾಂಜಲಿಯಿತ್ತು ರಾಜೀನಾಮೆ ನೀಡಿದ ರೆಸಾರ್ಟ್ ರಾಜಕಾರಣಿಗಳಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ ಎಂದು ಟೀಕಿಸಿ ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ರೈತರು ಲಜ್ಜೆಗೇಡಿ ಶಾಸಕರುಗಳ ರಾಜೀನಾಮೆ ಪ್ರಹಸನಕ್ಕೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿಧಾನಸಭೆಯನ್ನು ವಿಸರ್ಜಿಸಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಿದರು.

      ಈ ಮೂಲಕ ರೆಸಾರ್ಟ್ ರಾಜಕಾರಣಿಗಳಿಗೆ ತಕ್ಕ ಉತ್ತರ ಕಲಿಸಬೇಕೆಂದರು.ಈ ಸಂದರ್ಭದಲ್ಲಿ ಹುಳಿಯಾರು ಹೋಬಳಿ ಘಟಕದ ಅಧ್ಯಕ್ಷ ಕೆಂಕೆರೆ ಶಿವಣ್ಣ, ಕರಿಯಣ್ಣ, ದಾಸಪ್ಪ, ರಂಗನಕೆರೆ ಮಂಜಣ್ಣ, ಹೂವಿನ ರಘು, ಪಾತ್ರೆ ಸತೀಶ್ ಮೊದಲಾದವರಿದ್ದರು.

(Visited 28 times, 1 visits today)
Previous Articleರೆಸಾರ್ಟ್‍ನಲ್ಲಿ ಮಜಾ ಮಾಡುತ್ತಿರುವ ಶಾಸಕರು, ಸಚಿವರುಗಳ ವಿರುದ್ಧ ಪ್ರತಿಭಟನೆ
Next Article ಹಿರಿಯ ಅಧಿಕಾರಿಗಳ ದಬ್ಬಾಳಿಕೆಗೆ ಕಡಿವಾಣ ಹಾಕಲು ಆಗ್ರಹ!!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.