ತುಮಕೂರು:


ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ ಹಾಕಿರುವುದ್ನು ಖಂಡಿಸಿರುವ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಬಂಧಿತ ಎನ್.ಎಸ್.ಯು.ಐ ಕಾರ್ಯಕರ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು. ನಗರದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಬಂಧಿತರೊಂದಿಗೆ ಕೆಲ ಕಾಲ ಮಾತನಾಡಿ, ಪ್ರಕರಣದ ಸಂಪೂರ್ಣ ವಿವರಣೆ ಪಡೆದ ಆರ್.ರಾಜೇಂದ್ರ ಅವರು,ಬಂಧಿತರಿಗೆ ಧೈರ್ಯ ತುಂಬಿರುವುದಲ್ಲದೆ,ಶಾಂತಿಯುತ ಪ್ರತಿಭಟನೆ ನಡಸಲು ಮುಂದಾದ ಕಾರ್ಯಕರ್ತರನ್ನು ಮನೆಗೆ ಬೆಂಕಿ ಹಚ್ಚಲು ಬಂದಿದ್ದರು ಎಂದು ಸುಳ್ಳು ಆರೋಪ ಹೊರಸಿ ಜೈಲಿಗೆ ಅಟ್ಟಿರುವುದು ಸರಿಯಲ್ಲ.ಶಾಂತಿಯುತ ಪ್ರತಿಭಟನೆಯ ಭಾಗವಾಗಿಯೇ ಆರ್.ಎಸ್.ಎಸ್.ಸಂಕೇತವಾದ ಚಡ್ಡಿಗೆ ಬೆಂಕಿ ಹಚ್ಚಿದ್ದಾರೆ. ಆದರೆ ಇದನ್ನು ಸಹಿಸದ ಬಿಜೆಪಿ ಮುಖಂಡರು, ಎನ್.ಎಸ್.ಯು.ಐ ಕಾರ್ಯಕರ್ತರು ಗುಂಡಾಗಳು ಎಂಬಂತೆ ಬಿಂಬಿಸಿ,ವಿದ್ಯಾರ್ಥಿ ಸಂಘಟನೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಂಧನಕ್ಕೆ ಒಳಗಾಗಿರುವ ಎನ್.ಎಸ್.ಯು.ಐ ಕಾರ್ಯಕರ್ತರು ಹೇಳುವ ಪ್ರಕಾರ,ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ,ಪಠ್ಯ ಪುಸ್ತಕದಲ್ಲಿ ಕೋಮುವಾದ ತುಂಬಿರುವುದನ್ನು ವಿರೋಧಿಸಿ, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರ ಮನೆಯ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದ್ದು ಸರಿ. ಆ ವೇಳೆ ಕೋಮುವಾದಕ್ಕೆ ಕುಮ್ಮಕ್ಕು ನೀಡುತ್ತಿರುವ ಆರ್.ಎಸ್.ಎಸ್. ಸಂಘಟನೆಯ ಜನಪ್ರಿಯ ವಸ್ತುವಾದ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪೊಲೀಸರು ನಮ್ಮನ್ನು ತಡೆದು, ಬೆಂಕಿ ಆರಿಸಿದ್ದಾರೆ. ಇದು ಪ್ರತಿಭಟನೆಯ ಒಂದು ಭಾಗವೇ ಹೊರತು, ಬೆಂಕಿ ಹಚ್ಚುವ ದೃಷ್ಕøತ್ಯಕ್ಕೆ ನಾವ್ಯಾರು ಕೈ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಆದರೂ ಪೊಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದೆ ಕೇಸುಗಳನ್ನು ಹಾಕಿ ಪ್ರತಿಭಟನೆಯ ಮನೋಭಾವನೆಯನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಒಂದು ಆಡಳಿತ ಪಕ್ಷಕ್ಕೆ ಶೋಭೆ ತರುವಂತದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

(Visited 47 times, 1 visits today)