ತುಮಕೂರು:

      ಜಿಲ್ಲೆಯಲ್ಲಿ ಇಂದು 78 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 777 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 17, ಪಾವಗಡ-10 ಕುಣಿಗಲ್-24 ಮಧುಗಿರಿ-10, ಕೊರಗಟಗೆರೆ-08, ತುರುವೇಕೆರೆ-1, ಶಿರಾ-06, ತಿಪಟೂರು-02 ಮಂದಿ ತಾಲೂಕಿನಲ್ಲಿ ಒಟ್ಟು 78 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 53 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 411 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

     ಜಿಲ್ಲೆಯಲ್ಲಿ ಒಟ್ಟು 341 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 26 ಸಾವನ್ನಪ್ಪಿದ್ದು, ಸೋಮುವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 544 times, 1 visits today)