ತುಮಕೂರು : ನಾಳೆ ಮದ್ಯ ಮಾರಾಟ ನಿಷೇಧ!!

ತುಮಕೂರು :

      ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಲಿದ್ದು, ಜಿಲ್ಲಾದ್ಯಂತ ಹಿಂದೂಪರ ಸಂಘಟನೆಗಳು ದೇವಸ್ಥಾನಗಳಲ್ಲಿ ವಿಜಯೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

      ತುಮಕೂರು, ಸಿರಾ, ತಿಪಟೂರು, ಕುಣಿಗಲ್ ತಾಲ್ಲೂಕುಗಳು ಮತೀಯ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ಕಾಪಾಡುವ ಉದ್ದೇಶದಿಂದ ಮೇಲ್ಕಂಡ ಸೂಕ್ಷ್ಮ ಪ್ರದೇಶಗಳಲ್ಲಿ ಆಗಸ್ಟ್ 5ರ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

      ನಿಷೇಧಿತ ಅವಧಿಯಲ್ಲಿ ಎಲ್ಲಾ ರೀತಿ ಸನ್ನದು(ಕೆಎಸ್‍ಬಿಸಿಎಲ್ ಡಿಪೋ & ಡಿಸ್ಟಿಲರಿಗಳನ್ನು ಹೊರತುಪಡಿಸಿ)ಗಳನ್ನು ಮುಚ್ಚಬೇಕೆಂದು ಅವರು ಸೂಚನೆ ನೀಡಿದ್ದಾರೆ.

(Visited 5 times, 1 visits today)

Related posts

Leave a Comment