ತುಮಕೂರು : ಪರಿಷತ್ ಚುನಾವಣೆ : ನಾಳೆ ಬಹಿರಂಗ ಪ್ರಚಾರ ಅಂತ್ಯ!

 ತುಮಕೂರು :

       ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷ/ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವುದರೊಂದಿಗೆ ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಬೀದಿ ನಾಟಕ ಸೇರಿದಂತೆ ಮತ್ತಿತರ ಬಹಿರಂಗ ಪ್ರಚಾರಗಳನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.

       ಈ ಸೂಚನೆಯನ್ವಯ ಬಹಿರಂಗ ಚುನಾವಣಾ ಪ್ರಚಾರವನ್ನು ಡಿಸೆಂಬರ್ 7ರ ಸಂಜೆ 4 ಗಂಟೆಯೊಳಗೆ ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

(Visited 38 times, 1 visits today)

Related posts