ಲಿಂ.ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಲು ಸಂಸದರ ಆಗ್ರಹ

 ತುಮಕೂರು:

       ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಜನವರಿ 21ರಂದು ಲಿಂಗೈಕ್ಯರಾದ ಶತಾಯುಷಿ, ನಡೆದಾಡುವ ದೇವರು, ಪರಮಪೂಜ್ಯ ಶ್ರೀಶ್ರೀಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದರು.

      ಅನ್ನದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಪರಮಪೂಜ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪರಮಪೂಜ್ಯರಿಗೆ ಭಾರತರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಈ ಹಿಂದೆ ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಈವರೆಗೂ ನೀಡದೇ ಇರುವುದು ದುರಾದುಷ್ಟಕರ. ಈಗಲಾದರೂ ಪರಮಪೂಜ್ಯ ಶ್ರೀಗಳ ಸಾಧನೆಯನ್ನು ಗುರುತಿಸಿ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

(Visited 51 times, 1 visits today)

Related posts

Leave a Comment