ತುಮಕೂರು:

      ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ಉದ್ದಿಮೆ ಪರವಾನಗಿ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲು ಪಾಲಿಕೆ ಸದಸ್ಯರೆಲ್ಲರೂ ಸಹಮತ ನೀಡಿದರು.

      ಪಾಲಿಕೆ ಸಭಾಂಗಣದಲ್ಲಿ ನಡೆದ ಕೌನ್ಸಿಲ್ ವಿಶೇಷ ಸಾಮಾನ್ಯ ಸಭೆಯಲ್ಲಿ ಕೋವಿಡ್-19ನಿಂದಾಗಿ ಪಾಲಿಕೆ ವತಿಯಿಂದ ಉದ್ದಿಮೆ ದರಗಳನ್ನು ಶೇ.5ರಷ್ಟು ಹೆಚ್ಚಳ ಮಾಡುವಂತೆ ಆಗ್ರಹಿಸಿದರಲ್ಲದೇ ದಂಡ ಶುಲ್ಕ ಶೇ.30ರಷ್ಟು ಸೀಮಿತಗೊಳಿಸುವಂತೆ ಸದಸ್ಯರೆಲ್ಲರೂ ಒಮ್ಮತ ಸೂಚಿಸಿದರು.

      ಪಾಲಿಕೆ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ ಸಮಾಜ ಹಾಗೂ ಸವಿತಾ ಸಮಾಜ ಕಸುಬುಗಳಾದ ಕಟಿಂಗ್ ಶಾಪ್(ಹೇರ್ ಡ್ರೆಸೆಸ್) ಹಾಗೂ ಐರನ್ ಅಂಗಡಿಗಳಿಗೆ(ಲಾಂಡ್ರಿ ಡ್ರೈಕ್ಲಿಂಗ್ ಶಾಫ್) ಪಾಲಿಕೆ ನೀಡುವ ಪರವಾನಗಿ ದರವನ್ನು ಶೇ.50 ರಿಯಾಯಿತಿ ದರದಲ್ಲಿ ಅನ್ವಯವಾಗುವಂತೆ ಉದ್ದಿಮೆ ರಹದಾರಿಯನ್ನು ನೀಡಲು ಸಭೆ ತೀರ್ಮಾನಿಸಿತು. ಅಲ್ಲದೇ ಕಡಿಮೆ ಆದಾಯ ಹೊಂದಿರುವ ಇತರೆ ಸಮುದಾಯದವರಿಗೂ ಕೂಡ ಈ ದರ ಅನ್ವಯವಾಗುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಆಯುಕ್ತರಿಗೆ ಸದಸ್ಯರೆಲ್ಲರೂ ಆಗ್ರಹಿಸಿದರು.

        ಪಾಲಿಕೆ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಪಾಲಿಕೆ ಸದಸ್ಯ ಕುಮಾರ್ ಮಾತ ನಾಡಿ, ಸ್ಮಾರ್ಟ್‍ಸಿಟಿ, ಬೆಸ್ಕಾಂ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ನಗರದಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳಾದ ಗ್ಯಾಸ್‍ಲೈನ್, ಪೈಪ್‍ಲೈನ್, ವಿದ್ಯುತ್ ಪರಿವರ್ತಕಗಳ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ದುರಸ್ಥಿಗೊಳಿಸಿದ್ದಾರೆ. ಇವರಿಂದ ಪಾಲಿಕೆ ತೆರಿಗೆ ಸಂಗ್ರಹಿಸಬೇಕು ಎಂದು ಆಯುಕ್ತರ ಗಮನಕ್ಕೆ ತಂದರು.

      ಮೇಯರ್ ಫರೀದಾ ಬೇಗಂ ಮಾತನಾಡಿ, ಸದಸ್ಯರು ಪಾಲಿಕೆಗೆ ತರುವ ಎಲ್ಲಾ ಸಮಸ್ಯೆಗಳಿಗೆ ಆದ್ಯತೆ ಮೇಲೆ ಸ್ಪಂದಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಡ ಜನರಿಗೆ ಅನುಕೂಲವಾಗುವಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಂಡು ಕಾರ್ಯಗತಗೊಳಿಸಿದಾಗ ಮಾತ್ರ ಸಭೆಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು.

      ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಪಾಲಿಕೆ ಕೆಲಸ ಕಾರ್ಯಗಳನ್ನು ಕಾನೂನು ಚೌಕಟ್ಟಿಯಲ್ಲಿಯೇ ನಿರ್ವಹಿಸಬೇಕಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗು ವಂತಹ ಕಾರ್ಯಗಳನ್ನು ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕು ಎಂದರು. ಪಾಲಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಸ್ಥಾಪಿಸುವಂತೆ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಯಾವುದೇ ಪುತ್ಥಳಿಯನ್ನು ಸ್ಥಾಪಿಸುವ ಮುನ್ನಾ ಸರ್ಕಾರದ ಅನುಮತಿ ಪಡೆಯಬೇಕು. ಅದಕ್ಕಾಗಿ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಸಭೆಗೆ ತಿಳಿಸಿದರು.

      ಸಭೆಯಲ್ಲಿ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸದಸ್ಯರು, ಪಾಲಿಕೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

      ಕಂಬಗಳನ್ನು ಕೂಡಲೇ ತೆರವುಗೊಳಿಸಿ ಹೊಸ ಕಂಬಗಳನ್ನು ನೆಡಬೇಕು. ಎಷ್ಟೋ ಕಡೆ ಕಂಬಗಳು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದರೂ ಬೆಸ್ಕಾಂ ಗಮನಹರಿಸುತ್ತಿಲ್ಲ. ವಿದ್ಯುತ್ ಅವಘಡಗಳಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸದಸ್ಯರೊಬ್ಬರು ತಿಳಿಸಿದರು.

(Visited 4 times, 1 visits today)