ಪತ್ರಿಕಾಭವನಕ್ಕೆ ಪಾಲಿಕೆ ಆಯುಕ್ತರ ಭೇಟಿ

 ತುಮಕೂರು:

      ನಗರದ ಬಾಳನಕಟ್ಟೆ ಪ್ರದೇಶದಲ್ಲಿರುವ ಪತ್ರಿಕಾಭವನಕ್ಕೆ ಪಾಲಿಕೆ ಆಯುಕ್ತ ಭೂಬಾಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಪತ್ರಿಕಾಭವನದ ಸುತ್ತಮುತ್ತ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಭವನದ ಮುಂದೆ ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ತೊಂದರೆಯುಂಟಾಗುತ್ತಿದ್ದು, ಕ್ರಮ ಕೈಗೊಳ್ಳಬೇಕೆಂದು ಆಯುಕ್ತರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

      ನಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಭೇಟಿ ನೀಡಿ ಆವರಣವನ್ನು ಪರಿಶೀಲಿಸಿದರು. ಆವರಣದ ಮುಂದಿರುವ ಚರಂಡಿಯಲ್ಲಿ ಶೌಚಾಲಯದ ನೀರು ಹರಿಯುತ್ತಿರುವುದರಿಂದ ದುರ್ವಾಸನೆ ಬರುತ್ತಿದ್ದು, ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ವಾರ್ತಾ ಸಹಾಯಕಿ ರೂಪಕಲಾ ಅವರು ಮನವಿ ಮಾಡಿದಾಗ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಸಂಘದ ಗೋವಿಂದಪ್ಪ, ರಂಗರಾಜು, ಸಿ.ಎಸ್.ಕುಮಾರ್, ರಘುರಾಮ್, ಮತ್ತಿತರರು ಹಾಜರಿದ್ದರು.

(Visited 9 times, 1 visits today)

Related posts

Leave a Comment