ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ

 ತುಮಕೂರು:

      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ತಂಡ ಜೂನ್ 11ರಂದು ತುಮಕೂರು ಹಾಗೂ ಗುಬ್ಬಿ ತಾಲ್ಲೂಕುಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದೆ.

      ದಾಳಿಯಲ್ಲಿ ಗುಬ್ಬಿ ತಾಲ್ಲೂಕು ತಾಳೆಕೊಪ್ಪದ ಮಾರುತಿ ಪಾಲಿಕ್ಲಿನಿಕ್, ಚೇಳೂರಿನ ಸಂಜೀವಿನಿ ಕ್ಲಿನಿಕ್ ಹಾಗೂ ಹೆಲ್ತ್ ಸೆಂಟರ್; ತುಮಕೂರು ತಾಲ್ಲೂಕು ಗೂಳೂರು ಹಾಗೂ ರಾಜೀವ್ ಗಾಂಧಿ ನಗರದಲ್ಲಿರುವ ಶಿಫಾ ಕ್ಲಿನಿಕ್‍ಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರೀಕ್ಷಿಸಿದ ನಂತರ ನಕಲಿ ವೈದ್ಯರಿರುವುದು ಕಂಡು ಬಂದಿದೆ. ಕೂಡಲೇ ಕ್ರಮ ಕೈಗೊಂಡು ಸದರಿ ಆಸ್ಪತ್ರೆಗಳನ್ನು ಮುಚ್ಚಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಶರತ್ ಚಂದ್ರ ತಿಳಿಸಿದ್ದಾರೆ.

(Visited 3 times, 1 visits today)

Related posts

Leave a Comment