ಸಿದ್ಧಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50ಲಕ್ಷ ರೂ. ದೇಣಿಗೆ!!

ತುಮಕೂರು :

      ಕೊರೋನಾ ವೈರಸ್ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ 50ಲಕ್ಷ ರೂ.ಗಳ ಡಿಡಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.

       ಸಿದ್ಧಗಂಗಾ ಮಠದಲ್ಲಿಂದು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಸಿದ್ಧಗಂಗಾ ಮಠದಿಂದ 25ಲಕ್ಷ ರೂ. ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ.ಗಳು ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.

     ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಸಿದ್ಧಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ. ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.

(Visited 8 times, 1 visits today)

Related posts