BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜ. 31ಕ್ಕೆ ಸಿದ್ಧಗಂಗಾ ಶ್ರೀಗಳ ಪುಣ್ಯಾರಾಧನೆ
Trending

ಜ. 31ಕ್ಕೆ ಸಿದ್ಧಗಂಗಾ ಶ್ರೀಗಳ ಪುಣ್ಯಾರಾಧನೆ

By News Desk BenkiyabaleUpdated:January 24, 2019 5:01 pm

 ತುಮಕೂರು:

       ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ, ಬಸವ ಪ್ರಶಸ್ತಿ ಪುರಸ್ಕøತರಾದ ಲಿಂಗೈಕ್ಯ ಡಾ: ಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುಣ್ಯ ಸ್ಮರಣೆ ಸಮಾರಂಭವನ್ನು ಜನವರಿ 31ರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆಸಲಾಗುವುದು ಎಂದು ಸಿದ್ಧಗಂಗಾ ಮಠದ ಶ್ರೀಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತಿಳಿಸಿದರು.

      ಮಠದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ 21ರಂದು ಪ್ರಾತಃಕಾಲ 11.44 ಸಮಯದಲ್ಲಿ ಲಿಂಗೈಕ್ಯರಾದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭವನ್ನು 11ನೇ ದಿನವಾದ ಜ.31ರಂದು ಮಠದ ಆವರಣದಲ್ಲಿರುವ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಿರಿಗೆರೆಯ ತರಳಬಾಳು ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಡಾ: ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳು, ಬೆಂಗಳೂರು ಆರ್ಟ್ ಆಫ್ ಲಿವಿಂಗ್‍ನ ಪೂಜ್ಯ ಶ್ರೀ ರವಿಶಂಕರ್ ಗುರೂಜಿ ಹಾಗೂ ಕನಕಪುರ ದೇಗುಲ ಮಠದ ಪೂಜ್ಯ ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಪುಣ್ಯ ಸ್ಮರಣೆ ಸಮಾರಂಭ ಜರುಗಲಿದೆ. 

Displaying IMG-20190124-WA0094.jpg

      ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರಕ್ಷಣಾ ಸಚಿವೆ ನಿರ್ಮಲ ಸೀತಾರಾಮ್, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಎಂ.ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ.ಪಾಟೀಲ್, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ವಿಧಾನಸಭಾ ಸದಸ್ಯ ವಿ.ಸೋಮಣ್ಣ ಅವರು ನುಡಿ ನಮನ ಸಲ್ಲಿಸಲಿದ್ದಾರೆ.

      ಲೋಕಸಭಾ ಸದಸ್ಯ ಕೆ.ಹೆಚ್.ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಿ.ಜಡ್. ಜಮೀರ್ ಅಹ್ಮದ್ ಖಾನ್, ವಿಧಾನಸಭಾ ಸದಸ್ಯರಾದ ಬಸವರಾಜ ಹೊರಟ್ಟಿ ಹಾಗೂ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್, ಸಂಸದ ಮುದ್ದಹನುಮೇಗೌಡ, ಜಿಲ್ಲೆಯ ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಜಿ.ಬಿ.ಜ್ಯೋತಿಗಣೇಶ್, ಬಿ.ಸಿ.ಗೌರಿಶಂಕರ್, ಬಿ.ಸತ್ಯನಾರಾಯಣ, ಎಂ.ವಿ.ವೀರಭದ್ರಯ್ಯ, ಬಿ.ಸಿ.ನಾಗೇಶ್, ಎ.ಎಸ್.ಜಯರಾಮ್, ಡಾ: ಹೆಚ್.ಡಿ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ: ವೈ.ಎ.ನಾರಾಯಣ ಸ್ವಾಮಿ, ಕಾಂತರಾಜ್ ಹಾಗೂ ಆರ್.ಚೌಡರೆಡ್ಡಿ ತೂಪಲ್ಲಿ, ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್, ಬೆಂಗಳೂರು ಮಹಾನಗರಪಾಲಿಕೆ ಮಹಾ ಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್ ವಿಶೇಷ ಆಹ್ವಾನಿತರಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

      ಶ್ರೀಗಳ ಪುಣ್ಯ ಸ್ಮರಣೆಗೆ ಕಾಲಾವಕಾಶ ಕಡಿಮೆಯಿದ್ದು, ಎಷ್ಟೇ ಭಕ್ತರು ಬಂದರೂ ಸಹ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಪ್ರತಿನಿತ್ಯ ಬೆಳಿಗಿನಿಂದ ಸಂಜೆಯವರೆಗೆ ಗದ್ದುಗೆಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಕಡೆ ಭೇಟಿ ನೀಡಿ ಗದ್ದುಗೆಯನ್ನು ವಿನ್ಯಾಸ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಪರಮ ಪೂಜ್ಯರ ಆಶೀರ್ವಾದ ಹಾಗೂ ಭಕ್ತಾಧಿಗಳ ಸಹಕಾರದಲ್ಲಿ ಮಠದ ನಿರ್ವಹಣೆಗೆ ಯಾವುದೇ ತೊಂದರೆಯಿಲ್ಲ. ಮಠದಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕಡೆ ಪ್ರಥಮಾದ್ಯತೆ ನೀಡಲಾಗುವುದು ಎಂದು ತಿಳಿಸಿದರು.

Displaying DSC_9698.JPG

      ಶ್ಯಾಮನೂರು ಶಿವಶಂಕರಪ್ಪರವರು ಶಿವಕುಮಾರ ಸ್ವಾಮೀಜಿಯವರ ಕಂಚಿನ ಪುತ್ಥಳಿಯನ್ನು ಮಠಕ್ಕೆ ನೀಡಿದ್ದು ಅದನ್ನು ವಸ್ತು ಪ್ರದರ್ಶನ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ತಿಳಿಸಿದಲ್ಲದೆ ಮುಂದಿನ ದಿನಗಳಲ್ಲಿ ಶ್ರೀಗಳು ಉಪಯೋಗಿಸುತ್ತಿದ್ದ ಪ್ರತಿಯೊಂದು ವಸ್ತುವನ್ನು ಸಹ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಿದ್ಧಗಂಗಾ ಮಠದಲ್ಲಿ ಎಂದಿನಂತೆ ಯಾವುದೇ ಪೂಜಾ ಕೈಂಕರ್ಯಗಳು ನಿಲ್ಲುವುದಿಲ್ಲ. ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಜಾನುವಾರು ಜಾತ್ರೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ನಿಗಧಿತ ಸಮಯದಲ್ಲಿ ನಡೆಯುತ್ತವೆ ಎಂದು ತಿಳಿಸಿದರು.

      ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ದರ್ಶನ, ಅಂತ್ಯಕ್ರಿಯೆ, ಮತ್ತಿತರ ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಲು ಹಗಲಿರುಳು ಶ್ರಮಿಸಿದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿ ಶ್ರೀಗಳ ದರ್ಶನಕ್ಕೆ ಅನುವು ಮಾಡಿಕೊಟ್ಟ ರೈಲ್ವೆ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಶ್ರಮಿಸಿದ ಚೆನ್ನೈನ ರೇಲಾ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ, ಸ್ಥಳೀಯ ಸಿದ್ಧಗಂಗಾ ಅಸ್ಪತ್ರೆಯ ವೈದ್ಯರ ತಂಡದ ಕಾರ್ಯವನ್ನು ಶ್ಲಾಘಿಸಿದರು.

 

(Visited 79 times, 1 visits today)
Previous Article ತುಮಕೂರು : ಮುಸ್ಲಿಂ ಮಹಿಳೆಗೆ ಮೇಯರ್ ಸ್ಥಾನ ನೀಡಲು ಒತ್ತಾಯ
Next Article ಶಿಷ್ಟಾಚಾರ ಪಾಲಿಸದ ಪ.ಪಂ. ಮುಖ್ಯಾಧಿಕಾರಿಗೆ ಶಾಸಕರ ಕ್ಲಾಸ್
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.