BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಿವನ್ನು ಮೂಡಿಸುವವರೇ ನಿಜವಾದ ಗುರು-ಸಚಿವ ಜೆ.ಸಿ.ಮಾಧುಸ್ವಾಮಿ
Trending

ಅರಿವನ್ನು ಮೂಡಿಸುವವರೇ ನಿಜವಾದ ಗುರು-ಸಚಿವ ಜೆ.ಸಿ.ಮಾಧುಸ್ವಾಮಿ

By News Desk BenkiyabaleUpdated:September 05, 2019 7:28 pm

ತುಮಕೂರು:

      ವಿದ್ಯಾರ್ಥಿಗಳಿಗೆ ಅಕ್ಷರದೊಂದಿಗೆ ಬದುಕಿನ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುವವರೇ ನಿಜವಾದ ಗುರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.   

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ)ಯ ಸಹಯೋಗದಲ್ಲಿಂದು ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಶಿಕ್ಷಣಕ್ಕೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಶಕ್ತಿಯಿರುತ್ತದೆ. ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಕ್ಕಳು ಹಿರಿಯರ ಹಾಗೂ ಶಿಕ್ಷಕರ ನಡೆ-ನುಡಿಗಳನ್ನು ಅನುಸರಿಸುವ ಮನೋಭಾವ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ಧಿ ಹೇಳುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಗು ತನ್ನ ಜಗತ್ತಿನಲ್ಲಿ ಶಿಕ್ಷಕನೇ “ಸೂಪರ್ ಮ್ಯಾನ್”. ಗುರುವಿಗೆ ತಿಳಿಯದಿರುವ ವಿಷಯವೇ ಇಲ್ಲ ಎಂದು ಭಾವಿಸಿಕೊಂಡಿರುತ್ತದೆ. ಪ್ರತಿ ಮಗುವಿನ ಉತ್ತಮ ಭವಿಷ್ಯದ ಜೀವನವನ್ನು ರೂಪಿಸುವ ಶಕ್ತಿ ಶಿಕ್ಷಕರಿಗೆ ಮಾತ್ರ ಇರುತ್ತದೆ. ಅರ್ಥಪೂರ್ಣ ಪ್ರಜೆಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದರೆ ಶಿಕ್ಷಕರು ಬೇಧ-ಭಾವವಿಲ್ಲದೇ ವಿದ್ಯಾರ್ಥಿಗಳಿಗೆ ಸಮಾನವಾಗಿ ಶಿಕ್ಷಣ ನೀಡಬೇಕು. ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಳ್ಳುವಂತೆ ಹಾಗೂ ಪರೀಕ್ಷೆ ಸಮಯದಲ್ಲಿ ಪ್ರಶ್ನೆಯನ್ನು ಅರ್ಥ ಮಾಡಿಕೊಂಡು ಉತ್ತರ ಬರೆಯುವಂತೆ ಮಕ್ಕಳನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.   

      ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಹಿತ್ಯ ಸೇರಿದಂತೆ ಹಲವಾರು ಆಸಕ್ತ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಶಾಲೆಗಳಲ್ಲಿ ನಾಡಗೀತೆ ಹಾಡುವಾಗ “ಜೈ ಭಾರತ ಜನನಿಯ ತನುಜಾತೆ” ಬದಲು “ಜಯ ಭಾರತ ಜನನಿಯ ತನುಜಾತೆ” ಎಂದು ಹೇಳಬೇಕು. ನಾವು ಸದಾ ಜಯವನ್ನೇ ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರಲ್ಲದೇ ತಮ್ಮ ಶಾಲಾ ಜೀವನದ ಶಿಕ್ಷಕರನ್ನು ಸ್ಮರಿಸಿದರು.

      ಸಂಸದ ಜಿ.ಎಸ್.ಬಸವರಾಜು ಮಾತನಾಡಿ ಶಿಕ್ಷಣ ಎಂಬುದು ಸಾರ್ವತ್ರಿಕ ಹಾಗೂ ನಿರಂತರ ಪ್ರಕ್ರಿಯೆ. ಶಿಕ್ಷಕರು ರಾಷ್ಟ್ರ ಕಟ್ಟುವ ಕೆಲಸ ಮಾಡಬೇಕು. ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ. ಮಕ್ಕಳು ಏನೇ ತಪ್ಪು ಮಾಡಿದರೂ ಅದನ್ನು ತಿದ್ದುವ ಮನಸ್ಸು ಶಿಕ್ಷಕರಿಗಿರಬೇಕು ಎಂದು ತಿಳಿಸಿದರು.

      ಶಾಸಕ ಜ್ಯೋತಿಗಣೇಶ್ ಮಾತನಾಡಿ ನಮ್ಮ ಜೀವನದಲ್ಲಿ ಪ್ರಾಥಮಿಕ ಶಿಕ್ಷಣ ಮಟ್ಟದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಗುಡಿಯಲ್ಲಿ ದೇವರಿದ್ದಂತೆ, ಶಾಲೆಯಲ್ಲಿ ಶಿಕ್ಷಕರಿರುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯ ಶಿಕ್ಷಕರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹರಿಸುವಂತೆ ಸಚಿವರಿಗೆ ಮನವಿ ಮಾಡಿದರು.

      ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಮಾತನಾಡಿ ವಿದ್ಯಾರ್ಥಿಗಳನ್ನು ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಗುರು ಮಹತ್ವದ ಪಾತ್ರ ವಹಿಸುತ್ತಾನೆ. ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನೇ ನಾವಿಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಮಕ್ಕಳು ಮನೆಗಿಂತ ಹೆಚ್ಚು ಶಾಲೆಯಲ್ಲಿ ಸಮಯ ಕಳೆಯುತ್ತಾರೆ.

      ಮಕ್ಕಳು ಶಿಕ್ಷಕರ ಹವ್ಯಾಸ, ಶೈಲಿ, ವ್ಯಕ್ತಿತ್ವವನ್ನು ನೋಡಿ ಕಲಿಯುತ್ತಾರೆ. ಆದ್ದರಿಂದ ಮಕ್ಕಳನ್ನು ಉತ್ತಮ ಪ್ರಜೆಯಾಗಿಸಲು ಶಿಕ್ಷಕರು ಪ್ರಯತ್ನಿಸಬೇಕು. ಮಕ್ಕಳಿಗೆ ಪಾಠ ಮಾಡುವಾಗ ಪೌರಾಣಿಕ ಕಥೆಗಳ ಸನ್ನಿವೇಶಗಳನ್ನು ವಿವರಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರಲ್ಲದೇ ಬಾಲ್ಯದಿಂದ ಉನ್ನತ ಶಿಕ್ಷಣದವರೆಗೂ ಶಿಕ್ಷಕರ ಪಾತ್ರ ಮಹತ್ವವಾದುದು ಎಂದು ತಮ್ಮ ಶಿಕ್ಷಕರನ್ನು ನೆನೆದರು.

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ :

ಶಿಕ್ಷಕರ ದಿನಾಚರಣೆ ಪ್ರಯುಕ್ತ ತುಮಕೂರು(ದ) ಜಿಲ್ಲೆಯ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಗುಬ್ಬಿ ತಾಲ್ಲೂಕು ವಿರೂಪಾಕ್ಷಿಪುರ ಶಾಲೆಯ ಮಠದ ವೀರಯ್ಯ, ಕುಣಿಗಲ್ ತಾಲ್ಲೂಕು ಕೊಪ್ಪ ಹುಲಿವಾನ ಶಾಲೆಯ ಪುಟ್ಟೇಗೌಡ, ತಿಪಟೂರು ತಾಲ್ಲೂಕು ಆಲದಹಳ್ಳಿ ಶಾಲೆಯ ರಮೇಶ್, ತುಮಕೂರು ತಾಲ್ಲೂಕು ಉಪ್ಪಾರಪಾಳ್ಯ ಶಾಲೆಯ ವಿ.ಮಹಾದೇವಯ್ಯ ಹಾಗೂ ಹೊನ್ನಯ್ಯನಪಾಳ್ಯ ಶಾಲೆಯ ರುದ್ರಯ್ಯ, ತುರುವೇಕೆರೆ ತಾಲ್ಲೂಕು ಢಣನಾಯಕನಪುರ ಶಾಲೆಯ ಸಿ.ಪಿ.ಪ್ರಕಾಶ್; ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಗುಬ್ಬಿ ತಾಲ್ಲೂಕು ಡಿ.ಕಲ್ಲಹಳ್ಳಿ ಶಾಲೆಯ ಚನ್ನಬಸವಯ್ಯ, ಕುಣಿಗಲ್ ತಾಲ್ಲೂಕು ಜೋಡಿ ಹೊಸಹಳ್ಳಿ ಶಾಲೆಯ ಸ್ವರ್ಣಗೌರಿ, ತಿಪಟೂರು ತಾಲ್ಲೂಕು ಕರಡಾಳು ಶಾಲೆಯ ಹೆಚ್.ಎನ್.ರವೀಶ್, ತುಮಕೂರು ತಾಲ್ಲೂಕು ಶೆಟ್ಟಿಹಳ್ಳಿ ಶಾಲೆಯ ಎಂ.ಶೇಖರ್ ಹಾಗೂ ಸಿರಿವರ ಶಾಲೆಯ ಡಿ.ಎಂ.ಬೀರಪ್ಪ, ತುರುವೇಕೆರೆ ತಾಲ್ಲೂಕು ಅರಳೀಕೆರೆ ಶಾಲೆಯ ರೇಣುಕಮ್ಮ; ಪ್ರೌಢಶಾಲಾ ವಿಭಾಗದಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕೆಂಕೆರೆ ಹುಳಿಯಾರು ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಎನ್.ಲೋಕೇಶ್, ಗುಬ್ಬಿ ತಾಲ್ಲೂಕು ಸೋಮಲಾಪುರ ಗ್ರಾಮದ ಸೋಮೇಶ್ವರ ಪ್ರೌಢಶಾಲೆಯ ಸಹಶಿಕ್ಷಕ ಜಿ.ಎಸ್.ನಾಗೇಶ್, ಕುಣಿಗಲ್ ತಾಲ್ಲೂಕು ಇಪ್ಪಾಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ವಿ.ರಮೇಶ್, ತಿಪಟೂರು ತಾಲ್ಲೂಕು ಆಬ್ಬೂರು ಶಾಲೆಯ ಶಿವಕುಮಾರ್ ಹೆಚ್.ಬಿ., ತುಮಕೂರು ತಾಲ್ಲೂಕು ಹೊನ್ನುಡಿಕೆ ಹ್ಯಾಂಡ್‍ಪೋಸ್ಟ್ ಶಾಲೆಯ ಮುಖ್ಯಶಿಕ್ಷಕಿ ಎಂ.ನಾಗಮಣಿ ಹಾಗೂ ತುರುವೇಕೆರೆ ತಾಲ್ಲೂಕಿನ ಮೂಗಳೂರು ಪ್ರೌಢಶಾಲೆಯ ಸಹಶಿಕ್ಷಕಿ ಬಿ.ಶಚ್ಚೀಂದ್ರನ್ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

      ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಹೆಚ್.ವಿ.ವೀರಭದ್ರಯ್ಯ ಅವರು ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ|| ನವ್ಯಬಾಬು, ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತ ಕುಮಾರಿ, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಬಿಇಒ ರಂಗಧಾಮಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಹಾಲನೂರು ಎಸ್.ಲೇಪಾಕ್ಷ್ ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

(Visited 48 times, 1 visits today)
Previous Articleಮಧುಗಿರಿ : ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬಂದ್ ಬಾಗಶಃ ಯಶಸ್ವಿ
Next Article ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ : ಪ್ರತಿಭಟನೆ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.