ತುಮಕೂರು: 153 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು :

      ಜಿಲ್ಲೆಯಲ್ಲಿ 153 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3003 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 35, ಪಾವಗಡ-23, ಕುಣಿಗಲ್-14, ಮಧುಗಿರಿ-04, ಕೊರಗಟಗೆರೆ-16, ತುರುವೇಕೆರೆ-10, ಶಿರಾ-15, ತಿಪಟೂರು-18, ಗುಬ್ಬಿ-16, ಚಿಕ್ಕನಾಯಕನಹಳ್ಳಿ-02 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 153 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 93 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1883 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1031 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 89 ಸಾವನ್ನಪ್ಪಿದ್ದು, ಬುಧವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 7 times, 1 visits today)

Related posts

Leave a Comment