ತುರುವೇಕೆರೆ:

ತಾಲ್ಲೂಕಿನ ದಂಡಿನಶಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಕೆರೆ ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಸ್ಥಗಿತಗೊಂಡಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ನರೇಗಾ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.

ಗ್ರಾಮದ ಪ್ರಮುಖ ರಸ್ತೆ ಇದಾಗಿದ್ದು, ಸಾರ್ವಜನಿಕರು ನಾಗರಿಕರು ಗ್ರಾಮಕ್ಕೆ ತೆರಳದಂತಹ ಸನ್ನಿವೇಶ ಉಲ್ಬಣವಾಗಿದೆ.
ಡ್ರೈನೇಜ್ ಮಾಡಲು ಹೋಗಿ ರಸ್ತೆಯನ್ನು ಹಾಳು ಮಾಡಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಅಗೆದು ಸೀಮೆಂಟ್ ಪೈಪ್ ಹಾಕಲಾಗಿತ್ತು. ಈ ಅವೈಜ್ಞಾನಿಕ ಕಾಮಗಾರಿಯಿಂದ ಓಡಾಟಕ್ಕೆ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವರಾಜು ಮತ್ತು ಇಂಜಿನಿಯರ್ ಲೋಕೇಶ್ ಹಾಗೂ ತಾಲೂಕಿ ಇ.ಓ ಸತೀಶ್ ಅವರಿಗೆ ಗ್ರಾಮಸ್ಥರು ಹಲವು ಸಾರಿ ಮನವಿ ಮಾಡಿದರೂ ಸ್ಪಂದಿಸದ ಅಧಿಕಾರಿಗಳು ಲಂಚದ ಹಣಕ್ಕೆ ಆಸೆಗೆ ಬಿದ್ದು ಕಳಪೆ ಕಾಮಗಾರಿಗೆ ಬಿಲ್ ಪಾವತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಲ್ಲದೆ ಗುತ್ತಿಗೆದಾರ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಇಬ್ಬರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಸಾರ್ವಜನಿಕರ ಮನವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಿಇಓ ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಣೆ ನಡೆಸಿ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

(Visited 13 times, 1 visits today)