ತುಮಕೂರು :  

     ಜಿಲ್ಲೆಯಲ್ಲಿ 2 ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಮದ್ಯ ಮಾರಾಟ/ ಸಾಗಾಣಿಕೆ/ಶೇಖರಣೆ/ ಇತ್ಯಾದಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಅಬಕಾರಿ ಇಲಾಖೆಯಿಂದ ಕಠಿಣ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ನವೆಂಬರ್ 30 ರಿಂದ ಡಿಸೆಂಬರ್ 10ರವರೆಗೆ 223 ದಾಳಿಗಳನ್ನು ನಡೆಸಿ 32 ಘೋರ ಪ್ರಕರಣ, 111 15(ಎ) ಪ್ರಕರಣ, 12 ಬಿಎಲ್‍ಸಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, 440.250 ಲೀ. ಮದ್ಯ, 41.200 ಲೀಟರ್ ಬಿಯರ್, 8 ಸೇಂದಿ ಹಾಗೂ 20 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

  ದೂರು ಸಲ್ಲಿಸಲು ನಿಯಂತ್ರಣ ಕೊಠಡಿ:-

     ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಅಬಕಾರಿ ನಿಯಂತ್ರಣ ಕೊಠಡಿ(ಕಂಟ್ರೋಲ್ ರೂಂ)ಯನ್ನು ಸ್ಥಾಪಿಸಲಾಗಿದ್ದು, ಅಬಕಾರಿ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಅಬಕಾರಿ ಉಪ ಆಯುಕ್ತರ ಕಚೇರಿಯ ಕಂಟ್ರೋಲ್ ರೂಂ ಸಂಖ್ಯೆ: 0816-2272927 ಹಾಗೂ ಅಬಕಾರಿ ಇಲಾಖೆಯ ಟೋಲ್ ಫ್ರೀ ಸಂಖ್ಯೆ: 1800-4252-550ಗೆ ದೂರು ನೀಡಬಹುದಾಗಿದೆ.

      ಜಿಲ್ಲಾ ಮಟ್ಟದಲ್ಲಿ ಅಬಕಾರಿ ಉಪ ಆಯುಕ್ತರ ನೇರ ನಿಯಂತ್ರಣದಲ್ಲಿ 1 ವಿಚಕ್ಷಣ ದಳ  (Flying squad) ಹಾಗೂ ತುಮಕೂರು, ಮಧುಗಿರಿ ಮತ್ತು ತಿಪಟೂರು ವಿಭಾಗ ಮಟ್ಟದಲ್ಲಿ ಅಬಕಾರಿ ಉಪ ಅಧೀಕ್ಷರ ನೇತೃತ್ವದಲ್ಲಿ ಒಂದೊಂದು ವಿಚಕ್ಷಣ ದಳವನ್ನು ರಚಿಸಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

       ಅಬಕಾರಿ ಅಕ್ರಮಗಳ ಬಗ್ಗೆ ಸಾರ್ವಜನಿಕರು ಈ ವಿಚಕ್ಷಣ ತಂಡದ ಮುಖ್ಯಸ್ಥರ ದೂರವಾಣಿಗೂ ಸಹ ಕರೆ ಮಾಡಿ ದೂರು ನೀಡಬಹುದಾಗಿದ್ದು, ದೂರವಾಣಿ ಸಂಖ್ಯೆ ವಿವರ ಇಂತಿದೆ. ತುಮಕೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ-9449597050, ಮಧುಗಿರಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ-9449597054, ತಿಪಟೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ-9449597052 ಹಾಗೂ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕ-9449597048ಕ್ಕೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

(Visited 10 times, 1 visits today)